Mysore
17
few clouds

Social Media

ಮಂಗಳವಾರ, 13 ಜನವರಿ 2026
Light
Dark

ಕರ್ನಾಟಕದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗ, ಉತ್ತರ ಮತ್ತು ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ.

ಅಕ್ಟೋಬರ್.‌14ರವರೆಗೂ ಉತ್ತರ ಕನ್ನಡ, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ಹುಬ್ಬಳ್ಳಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

 

Tags:
error: Content is protected !!