Mysore
27
broken clouds

Social Media

ಮಂಗಳವಾರ, 13 ಜನವರಿ 2026
Light
Dark

ರಾಜ್ಯದಲ್ಲಿ ಮತ್ತೊಂದು ಜಾಹೀರಾತು ಯುದ್ಧ

ಬೆಂಗಳೂರು: ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನು ಅಸ್ಥಿರಗೊಳಿಸಲು ಮೋಸ ಮತ್ತು ವಾಮಮಾರ್ಗದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ನಿಗ್ರಹಿಸಲಿ ಎಂದು ಎಲ್ಲಾ ಪತ್ರಿಕೆಗಳಲ್ಲಿ ಇಂದು ಮುಖಪುಟಗಳಲ್ಲಿಯೇ ಕಾಂಗ್ರೆಸ್‌ ಜಾಹೀರಾತು ನೀಡಿ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದೆ.

ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತವೆ. ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಷಡ್ಯಂತ್ರ ನಡೆಸುತ್ತಿವೆ. ಆದರೆ, ಈ ಮಧ್ಯೆ ಕಾಂಗ್ರೆಸ್‌ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸರ್ಕಾರದಿಂದ ಶುಭಾಶಯ ಕೋರುವ ವಿರೋಧ ಪಕ್ಷಗಳಿಗೆ ಕೌಂಟರ್‌ ಕೊಟ್ಟಿದೆ. ಅಲ್ಲದೇ, ಮೋಸದಿಂದ ಹಾಗೂ ವಾಮಮಾರ್ಗದಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವ ಪ್ರಯತ್ನವೂ ಸಾಧ್ಯವಿಲ್ಲ ಎಂದು ಹೇಳಿದೆ.

ಕಾಂಗ್ರೆಸ್‌ ಪಕ್ಷ ಎಲ್ಲಾ ಪತ್ರಿಕೆಗಳಲ್ಲಿ ಬೆಳ್ಳಂಬೆಳಿಗ್ಗೆ ಜಾಹೀರಾತು ನೀಡಿ ಶುಭಾಶಯ ಕೋರಿದ್ದು, ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗೆ ಟಾಂಗ್‌ ನೀಡಿದೆ.

 

Tags:
error: Content is protected !!