Mysore
30
scattered clouds

Social Media

ಭಾನುವಾರ, 08 ಫೆಬ್ರವರಿ 2026
Light
Dark

ವಿಜಯದಶಮಿ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಾದ್ಯಂತ ಸಂಭ್ರಮದಿಂದ ವಿಜಯದಶಮಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದರ್ಗಾ ಮಾತೆ ಮತ್ತು ಪ್ರಭು ಶ್ರೀರಾಮನ ಆಶೀರ್ವಾದದಿಂದ ನೀವೆಲ್ಲರೂ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಜಯ ಸಾಧಿಸಬೇಕೆಂದು ನಾನು ಬಯಸುತ್ತೇನೆ.

ವಿಜಯದಶಮಿ ದುರ್ಗಾ ಪೂಜೆಯ ಕೊನೆಯ ದಿನವಾಗಿದೆ ಮತ್ತು ರಾಕ್ಷಸ ದೊರೆ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಸ್ಮರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಶುಭ ಹಾರೈಸಿದ್ದಾರೆ.

ಇನ್ನು ಜನತೆಗೆ ಕೇಂದ್ರ ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ ಹಲವು ಗಣ್ಯರು ವಿಜಯದಶಮಿ ಶುಭಾಶಯ ತಿಳಿಸಿದ್ದಾರೆ.

 

Tags:
error: Content is protected !!