ಮೈಸೂರು: ವಿಜಯದಶಮಿ ಹಬ್ಬದ ಪ್ರಯುಕ್ತ ವಿಶ್ವವಿಖ್ಯಾತ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 4 ಗಂಟೆಗೆ ಚಾಲನೆ ನೀಡಲಿದ್ದಾರೆ.
ನಾಡಹಬ್ಬ ಮೈಸೂರು ದಸರಾದ ನವರಾತ್ರಿಯ ಕೊನೆಯ ದಿನದಂದು ಜರುಗುವ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಜೆ 4 ರಿಂದ 4.30 ಗಂಟೆಗೆ ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅದ್ದೂರಿಯಾಗಿ ಚಾಲನೆ ನೀಡಿಲಿದ್ದಾರೆ. ಈ ಜಂಬೂಸವಾರಿಯನ್ನು ವೀಕ್ಷಿಸಲು ಅರಮನೆ ಅಂಗಳದಲ್ಲಿ ಸುಮಾರು 40 ಸಾವಿರ ಆಸನಗಳನ್ನು ವ್ಯವಸ್ಥೆ ಮಾಡಲಾಗಿದೆ.
ಇಂದು ನಡೆಯಲಿರುವ ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಯಾಪ್ಟನ್ ಅಭಿಮನ್ಯು ಆನೆ 750 ಕೆ.ಜಿ ತೂಕದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜ ಬೀದಿಗಳಲ್ಲಿ ಸಾಗುತ್ತಾನೆ.