ಮೈಸೂರು: ಮೈಸೂರಿನ ಹಲವೆಡೆ ಶನಿವಾರ ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ವಿಜಯದಶಮಿಯಂದೆ ಮೈಸೂರಿನಲ್ಲಿ ಮಳೆಯ ಸಿಂಚನವಾಗಿದ್ದು, ಇಂದು ಮಧ್ಯಾಹ್ನದಿಂದಲೇ ನಗರದ ವಿವಿಧೆಡೆ ಜಿಟಿಜಿಟಿ ಮಳೆಯಾಗಿದೆ. ದಸರಾ ಜಂಬೂಸವಾರಿ ಸಾಗುವಾಗಲೂ ಮಳೆಯ ಸಿಂಚನವಾಗಿದ್ದು, ಸಹಸ್ರಾರು ಮಂದಿ ಮಳೆಯನ್ನು ಲೆಕ್ಕಿಸದೇ ಜಂಬೂಸವಾರಿಯನ್ನು ಕಣ್ತುಂಬಿಕೊಂಡಿದ್ದಾರೆ.
ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾಗಿತ್ತು ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿದ ಹಲವೆಡೆ ಮಳೆಯಾಗಲಿದೆ.
ಇನ್ನೂ ಅ.16 ರಿಂದ 18 ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ ಹಾಗೂ ತುಮಕೂರಿನಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಹೇಳಿದೆ.
ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದ, ಈ ಜಿಲ್ಲೆಗಳಿಗೆ ಮುಂದಿನ ಏಳು ದಿನಗಳು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.