Mysore
29
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭಯೋತ್ಪಾದಕ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಕಪ್ಪು ಬಾವುಟ ಪ್ರದರ್ಶಿಸಿ ಯಾವಾಗಲೂ ಪ್ರತಿಭಟನೆ ಮಾಡುತ್ತಾರೆ ಅದಕ್ಕೆ ನಾವೇನೂ ಮಾಡಲು ಆಗಲ್ಲ ಎಂದು ಕಿಡಿಕಾರಿದರು.

ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯಬೇಕೆಂದು ನಿರ್ಧರಿಸಿದೆ. ಬಳಿಕ, ಸಂಪುಟದ ನಿರ್ಧಾರ ನ್ಯಾಯಾಲಯದ ಮುಂದೆ ಹೋಗಬೇಕು. ನ್ಯಾಯಾಲಯ ಒಪ್ಪಿದರೆ ಮಾತ್ರ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆದಂತೆ ಆಗುತ್ತದೆ ಎಂದರು.

ಈ ಪ್ರಕರಣದ ಬಗ್ಗೆ ಬಿಜೆಪಿ ಅವರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ನ್ಯಾಯಾಲಯದಲ್ಲಿ ಸುಳ್ಳು ಕೇಸ್‌ ಇದ್ದರೆ ಅಥವಾ ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದರೆ ಹಾಗೂ ಹೋರಾಟ ಮಾಡಿದಾಗ ಪ್ರಕರಣ ದಾಖಲಾಗಿದ್ದರೆ ಅಂತಹ ಕೇಸ್‌ಗಳನ್ನು ಹಿಂಪಡೆಯುವ ಅವಕಾಶವಿದೆ ಎಂದು ಸ್ಪಷ್ಟನೆ ನೀಡಿದರು.

ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಬಗ್ಗೆ ಮಾತನಾಡಿದ ಅವರು, ಜೋಶಿ ಓರ್ವ ಭಯೋತ್ಪಾದಕ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.

 

Tags:
error: Content is protected !!