Mysore
27
broken clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಬಿಗ್‌ ಬಾಸ್‌ ತೊರೆಯಲು ಸುದೀಪ್‌ ನಿರ್ಧಾರ: ಅಧಿಕೃತ ಘೋಷಣೆ

ಬೆಂಗಳೂರು:‌ ಕನ್ನಡ ಬಿಗ್‌ ಬಾಸ್ 11ನೇ ಆವೃತ್ತಿ ಎರಡನೇ ವಾರ ಕಳೆದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ಬಿಗ್‌ಬಾಸ್‌ನ ನಿರೂಪಕ ಕಿಚ್ಚ ಸುದೀಪ್‌ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು, ಇದೇ ತಮ್ಮ ಕೊನೆಯ ಸೀಸನ್‌ ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಸುದೀಪ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಧಿಕೃತ ಘೋಷಣೆ ಮಾಡಿದ್ದು, ಈ 10ಪ್ಲಸ್‌ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ ಎಂದಿದ್ದಾರೆ.

ಬಿಗ್‌ಬಾಸ್‌ ಕನ್ನಡ 11 ರ ಶೋಗೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ಸಿಕ್ಕಿರುವ ಟಿಆರ್‌ಪಿ ನೋಡಿದರೆ ನನ್ನ ಬಗ್ಗೆ ಮತ್ತು ಶೋ ಬಗ್ಗೆ ನೀವು ತೋರಿಸಿದ ಪ್ರೀತಿ ತಿಳಿಯುತ್ತದೆ. ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್‌ ಬಾಸ್.‌ ಇಷ್ಟು ವರ್ಷಗಳ ಕಾಲ ಬಿಗ್‌ಬಾಸ್‌ ಕಾರ್ಯಕ್ರಮವನ್ನು ನೋಡಿ ನೀವು ಮತು ಕಲರ್ಸ್‌ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ ಎಂದು ಬರೆದುಕೊಂಡಿದ್ದಾರೆ.

Tags:
error: Content is protected !!