Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಸಿದ್ದಾರ್ಥ ಟ್ರಸ್ಟ್‌ನ ನಿವೇಶನ ವಾಪಸ್‌: ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ಸಿದ್ದಾರ್ಥ ವಿಹಾರ್‌ ಟ್ರಸ್ಟ್‌ನ ನಿವೇಶನವನ್ನು ಕೆಐಎಡಿಬಿಗೆ ವಾಪಸ್‌ ನೀಡಿರುವುದು ತಪ್ಪು ಮಾಡಿದ್ದಾರೆ ಅನ್ನೋ ಕಾರಣಕ್ಕೆ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಾರ್ಥ ವಿಹಾರ್‌ ಟ್ರಸ್ಟ್‌ನ ನಿವೇಶನ ಹಂಚಿಕೆಯಾಗಿದ್ದ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಸುಮ್ಮನೆ ಯಾಕೆ ಗೊಂದಲ ಎಂದು ಭೂಮಿ ವಾಪಸ್‌ ನೀಡಿದ್ದಾರೆ. ಅಲ್ಲದೇ ಈ ನಿವೇಶನದ ವಿಚಾರವಾಗಿ ರಾಜ್ಯಪಾಲರ ಅಂಗಳಕ್ಕೆ ನಿವೇಶನ ಅವ್ಯವಹಾರ ನಡೆದಿದೆ ಎಂಬ ಆರೋಪದ ವಿವಾದದ ಕಾವು ಹೆಚ್ಚಾಗುವ ಮೊದಲೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದರು.

 

Tags: