ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದು, ಜಾಮೀನು ಅರ್ಜಿಗಾಗಿ ಜನಪ್ರತಿನಿಧಿ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ.ಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನಡೆಸಿದ 57ನೇ ಸಿಎಚ್‌ಎಚ್ ನ್ಯಾಯಾಲಯವೂ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಪರಪ್ಪನ ಅಗ್ರಹಾರ ಜೈಲುವಾಸ ಅನುಭವಿಸುವ ಹಾಗೆ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯು ಸಹ ವಜಾಗೊಳಿಸಿದೆ. ಕೇವಲ ಎ8 ಆರೋಪಿ ರವಿಶಂಕರ್ ಹಾಗೂ ಎ13 ಆರೋಪಿ ದೀಪಕ್ ಅವರಿಗೆ ಮಾತ್ರ ಜಾಮೀನು ಮಂಜೂರು ಮಾಡಿದೆ.