ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.17ರ ಬೆಳಿಗ್ಗೆ ಕಾವೇರಿ ತೀಥೋದ್ಬವವಾಗಲಿದೆ.
ಕೊಡಗಿನ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.17ರಂದು ಕಾವೇರಿ ನೀರು ತೀರ್ಥ ರೂಪದಲ್ಲಿ ಉಗಮವಾಗಲಿದೆ.
ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಬಹಳ ಹಿಂದಿನ ಕಾಲದಿಂದಲೂ ಇದೆ.
ಅದರಂತೆ ಪ್ರತಿವರ್ಷ ತೀರ್ಥೋದ್ಬವದ ಸಮಯದಲ್ಲಿ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.
ಈ ಹಿನ್ನೆಲೆಯಲ್ಲಿ ತಲಕಾವೇರಿ ಸಕಲ ಸಿದ್ಧತೆ ನಡೆಯುತ್ತಿದ್ದು, ಸ್ವಚ್ಛತಾ ಕಾರ್ಯ ನಡೆಯುತ್ತಿದೆ.