Mysore
29
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ಸ್ನೇಹಮಯಿ ಕೃಷ್ಣ ಒಬ್ಬ ಕ್ರಿಮಿನಲ್‌ ಹಿನ್ನೆಲೆ ಇರುವ ವ್ಯಕ್ತಿ: ಎಂ.ಲಕ್ಷ್ಮಣ್‌ ವಾಗ್ದಾಳಿ

ಮೈಸೂರು: ಸ್ನೇಹಮಯಿ ಕೃಷ್ಣ ಒಬ್ಬ ಕ್ರಿಮಿನಲ್‌ ಹಿನ್ನೆಲೆ ಇರುವ ವ್ಯಕ್ತಿ. ಅವನ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮೈಸೂರಿನ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಪದೇ ಪದೇ ಆಗ್ರಹಿಸುತ್ತಿದ್ದಾನೆ. ಪ್ರತಿನಿತ್ಯ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ವಿರುದ್ಧ ಒತ್ತಡ ಹೇರುತ್ತಿದ್ದಾನೆ. ಬಿಜೆಪಿ ನಾಯಕರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾನೆ ಎಂದು ಗಂಭೀರ ಆರೋಪ ಮಾಡಿದರು.

ಮಾಧ್ಯಮಗಳ ಮುಂದೆ ಸುಳ್ಳು ಹೇಳಿಕೆಗಳನ್ನು ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾನೆ. ಸ್ನೇಹಮಯಿ ಕೃಷ್ಣ ಕೇಂದ್ರ ಸರ್ಕಾರದ ಸೂತ್ರಧಾರನಂತೆ ವರ್ತನೆ ಮಾಡುತ್ತಿದ್ದು, ಮೊದಲು ಅವನನ್ನು ಲೋಕಾಯುಕ್ತ ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದರು.

Tags:
error: Content is protected !!