Mysore
20
mist

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಹುಣ್ಣಿಮೆ ಹಿನ್ನೆಲೆ ದಕ್ಷಿಣ ಕಾಶಿ ನಂಜನಗೂಡಿಗೆ ಹರಿದು ಬಂದ ಜನಸಾಗರ

ನಂಜನಗೂಡು: ಇಂದು ಹುಣ್ಣಿಮೆ ಅಂಗವಾಗಿ ದಕ್ಷಿಣಕಾಶಿ ನಂಜನಗೂಡಿಗೆ ಅಪಾರ ಜನರು ಭೇಟಿ ನೀಡಿ ನಂಜುಂಡೇಶ್ವರನ ದರ್ಶನ ಪಡೆಯುತ್ತಿದ್ದಾರೆ.

ರಾಜ್ಯದ ನಾನಾ ಭಾಗಗಳಿಂದ ಆಗಮಿಸಿರುವ ಸಾರ್ವಜನಿಕರು ಇಂದು ಬೆಳಿಗ್ಗೆ 4.30ರಿಂದಲೇ ಕಪಿಲಾ ನದಿಯ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ದೇವಾಲಯದ ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಹುಣ್ಣಿಮೆ ಪ್ರಯುಕ್ತ ಇಂದು ಮುಂಜಾನೆಯೇ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ಸೇವೆ ನೆರವೇರಿಸಲಾಯಿತು.

ಇನ್ನು ದಾಸೋಹ ಭವನದಲ್ಲಿ ನೆರೆದಿದ್ದ ಜನರಿಗೆ ಅನ್ನ ದಾಸೋಹದ ವ್ಯವಸ್ಥೆ ಮಾಡಲಾಗಿದೆ. ದೇವಾಲಯಕ್ಕೆ ಬರುವ  ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದ್ದು, ಬಸ್‌ ನಿಲ್ದಾಣದಲ್ಲಿ ಹೆಚ್ಚಿನ ಜನಸಂದಣಿ ಕಂಡುಬಂದಿದೆ.

 

 

Tags:
error: Content is protected !!