ಕೊಡಗು: ಎರಡು ಕಾರುಗಳ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಡಿಕೇರಿಯಿಂದ ಸುಂಟಿಕೊಪ್ಪ ಕಡೆಗೆ ಬರುತ್ತಿದ್ದ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಮಡಿಕೇರಿಗೆ ಹೋಗುತಿದ್ದ ಕಾರಿನ ನಡುವೆ ಕೆದಕಲ್ ದೇವರಕಾಡು ಬಳಿ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರುಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.