Columbus
20
broken clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಬಿಜೆಪಿ ಶಾಸಕ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಿದೆ.

ತಬಸ್ಸುಮ್‌ ರಾವ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್.‌29ರಂದು ಪುರಸ್ಕರಿಸಿದ್ದ ಕೋರ್ಟ್‌ ಅಕ್ಟೋಬರ್.‌16ರಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸಿತ್ತು.

ಆದರೆ ಯತ್ನಾಳ್‌ ನಿನ್ನೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್.‌28ಕ್ಕೆ ಮುಂದೂಡಿಕೆ ಮಾಡಿದೆ.

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತಬಸ್ಸುಮ್‌ ರಾವ್‌ ಎಂಬುವವರು ಯತ್ನಾಳ್‌ ವಿರುದ್ಧ ದೂರು ನೀಡಿದ್ದರು.

Tags:
error: Content is protected !!