Mysore
21
overcast clouds

Social Media

ಶನಿವಾರ, 19 ಅಕ್ಟೋಬರ್ 2024
Light
Dark

ವಾಲ್ಮೀಕಿ ಪ್ರಶಸ್ತಿಗೆ ಭಾಜನರಾಜ ಗುಂಡ್ಲುಪೇಟೆ ರತ್ನಮ್ಮ

ಚಾಮರಾಜನಗರ: 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ಸಾಧಕರಿಗೆ ಕೊಡಮಾಡುವ ವಾಲ್ಮೀಕಿ ಪ್ರಶಸ್ತಿಗೆ ಗುಂಡ್ಲುಪೇಟೆಯ ರತ್ನಮ್ಮ ಆಯ್ಕೆಯಾಗಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಕಾಲೋನಿಯವರಾದ ಡಾ.ರತ್ಮಮ್ಮ ಎಸ್‌ ಅವರು, ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ ತೀವ್ರ ಹೋರಾಟ ಮಾಡಿದ್ದಾರೆ.

ಖುದ್ದು ಬುಡಕಟ್ಟು ಪ್ರದೇಶಗಳಿಗೆ ಭೇಟಿ ನೀಡಿ ಸಮುದಾಯದ ಮನವೊಲಿಸಿ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡುವುದು ಇವರ ಪ್ರಮುಖ ಕೆಲಸವಾಗಿದೆ.

ಹಳ್ಳಿ ಹಳ್ಳಿಗಳಲ್ಲಿ ತೆರಳಿ ಸಮುದಾಯದ ಶಿಕ್ಷಣಕ್ಕೆ ಪೂರಕವಾದ ಕಾರ್ಯಕ್ರಮಗಳು ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಿಗೆ ಶಿಕ್ಷಣ ಕೊಡಿಸುವುದೇ ಇವರ ಪ್ರಮುಖ ಸಾಧನೆಯಾಗಿತ್ತು.

ಇದರ ಜೊತೆಗೆ ಸಮುದಾಯದವರಿಗೆ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು. ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡುವುದು. ಸಮುದಾಯದ ಕಲೆ, ಕುಲ ಕಸುಬು, ಸಂಸ್ಕೃತಿಯನ್ನು ಸಂರಕ್ಷಿಸುವುದು ಹಾಗೂ ಪೋಷಿಸುವ ನಿಟ್ಟಿನಲ್ಲಿ ಇವರು ಅಪಾರ ಶ್ರಮ ವಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇವರ ಸೇವೆಯನ್ನು ಗುರುತಿಸಿದ ರಾಜ್ಯ ಸರ್ಕಾರ ರತ್ನಮ್ಮ ಅವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಿದೆ.

ರತ್ನಮ್ಮರಿಗೆ 20 ಗ್ರಾಂ ಬಂಗಾರದ ಪದಕ ಹಾಗೂ ಐದು ಲಕ್ಷ ರೂ ನಗದು ನೀಡಿ ಗೌರವಿಸಲಾಗಿದೆ.

 

 

Tags: