Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹರ್ಷಿ ವಾಲ್ಮೀಕಿಗೆ ಗೌರವ ಸೂಚಿಸುವ ಸಲುವಾಗಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದೇಶದಲ್ಲಿ ಮಹಾಕಾವ್ಯಗಳನ್ನು ಬರೆದವರೆಲ್ಲಾ ತಳ ಸಮುದಾಯದವರೇ. ಆ ಕಾಲದಲ್ಲಿ ತಳಸಮುದಾಯವರಿಗೆ ಶಿಕ್ಷಣ ನಿಷಿದ್ಧವಾಗಿತ್ತು. ಆದರೂ ಅವರೆಲ್ಲಾ ದೊಡ್ಡ ದೊಡ್ಡ ಮಹಾಕಾವ್ಯ ಬರೆದಿದ್ದಾರೆ ಎಂದರು.

ಅದರಲ್ಲಿ ಪ್ರಮುಖರು ಮಹರ್ಷಿ ವಾಲ್ಮೀಕಿ ಅವರು. ಈ ಹಿನ್ನೆಲೆಯಲ್ಲಿ ಇಂದು ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ವಾಲ್ಮೀಕಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಣೆ ಮಾಡಿದರು.

 

Tags: