ಮೈಸೂರು: ಇನ್ನು ನಾಲ್ಕೈದು ದಿನಗಳಲ್ಲಿ ಚನ್ನಪಟ್ಟಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರೆಂದು ಘೋಷಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. ಉಪಚುನಾವಣೆಯಲ್ಲಿ ಚನ್ನಪಟ್ಟಣ ಬಹಳ ಕುತೂಹಲ ಮೂಡಿಸಿದೆ. ಈಗಾಗಲೇ ಆಕಾಂಕ್ಷಿಗಳು ಅರ್ಜಿ ಹಾಕಿದ್ದಾರೆ ಎಂದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾನೇ ಅಭ್ಯರ್ಥಿ ನಾನೇ ಎಂದು ಹೇಳಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ಅಭ್ಯರ್ಥಿ ಯಾರೆಂದು ಇನ್ನು ನಾಲ್ಕೈದು ದಿನಗಳಲ್ಲಿ ಘೋಷಣೆ ಆಗಲಿದೆ ಎಂದರು.
ಇನ್ನು ಮರೀಗೌಡ ರಾಜೀನಾಮೆ ವಿಚಾರ ಕುರಿತು ಮಾತನಾಡಿದ ಅವರು, ಮರೀಗೌಡ ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ತನಿಖೆಗೆ ಒಳ್ಳೆಯದೇ ಆಗಿದೆ. ಪಾರದರ್ಶಕ ತನಿಖೆ ಆಗಲಿ ಎಂದು ರಾಜೀನಾಮೆ ಕೊಟ್ಟಿದ್ದಾರೆ. ಇದರಿಂದ ಮುಡಾದಿಂದ ಸಿಎಂಗೆ ಅಂಟಿರುವ ಕಳಂಕ ದೂರ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.