Mysore
30
light rain

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ ಎಲ್ಲ ವಯೋಮಾನದವರೂ ಕಣ್ತುಂಬಿಕೊಳ್ಳಲು ಸಾಧ್ಯವಾಯಿತುಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ ಎಲ್ಲ ವಯೋಮಾನದವರೂ ಕಣ್ತುಂಬಿಕೊಳ್ಳಲು ಸಾಧ್ಯವಾಯಿತು. ಯುವದಸರಾ, ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಮಹಿಳಾ ದಸರಾ, ರಂಗೋಲಿ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜನೆಯಲ್ಲಿ ಜಿಲ್ಲಾಡಳಿತ ಶಿಸ್ತು ಕಾಪಾಡಿಕೊಳ್ಳುವ ಜತೆಗೆ ೭೦೦ಕ್ಕೂ ಅಧಿಕ ಸ್ಥಳೀಯ ಕಲಾವಿದರಿಗೆ ಈ ಬಾರಿ ಅವಕಾಶ ನೀಡಿದ್ದು ವಿಶೇಷವೆನಿಸಿತು. ಜಿಲ್ಲೆಯ ಪ್ರಮುಖ ಬೀದಿಗಳಲ್ಲಿ ಅಳವಡಿಸಿದ್ದ ವರ್ಣರಂಜಿತ ದೀಪಾಲಂಕಾರ ಗಮನ ಸೆಳೆಯಿತು. ಕಾರ್ಯಕ್ರಮಗಳ ಯಶಸ್ವಿಗಾಗಿ ಶ್ರಮಿಸಿದ ಮಹಿಳಾ ಅಧಿಕಾರಿಗಳಾದ ಜಿಲ್ಲಾಧಿಕಾರಿ ಸಿ. ಟಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಟಿ. ಕವಿತಾ, ಮುಖ್ಯ ಕಾರ್ಯನಿರ್ವಹಣಾಽಕಾರಿ ಮೋನಾ ರೋತ್, ಅಪಾರ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿ. ಪಂ. ಉಪಕಾರ್ಯದರ್ಶಿ ಲಕ್ಷಿ ಅವರಿಗೆ ಅಭಿನಂದನೆಗಳು. -ಅನುಷಾ ಗಂಗಾಧರ್, ಚಾಮರಾಜನಗರ ತಾ.

 

Tags: