ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮೈಸೂರು ಮುಡಾ ಹಗರಣ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಲ್ಲಾ ಕಡೆ ಆರೋಪಗಳು ಕೇಳಿಬರುತ್ತಿವೆ.
ಹೀಗಿರುವಾಗಲೇ ಈಗ ಮುಡಾ ಕಚೇರಿಗೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗುತ್ತದೆ.
ಹೀಗಾಗಿ ಮುಡಾ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎನ್ನುವುದರ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಹಾಗಾಗಿ ಈ ಕೇಸನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದರು.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಸುರೇಶ್ ಅವರನ್ನು ಸಹ ತನಿಖೆಗೆ ಒಳಪಡಿಸಬೇಕು. ಆಗ ಮಾತ್ರ ಎಲ್ಲಾ ಸತ್ಯ ಸತ್ಯತೆ ಹೊರಗಡೆ ಬರಲಿದೆ ಎಂದರು.