Mysore
21
overcast clouds

Social Media

ಗುರುವಾರ, 01 ಜನವರಿ 2026
Light
Dark

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 99 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ: 288 ಸದಸ್ಯ ಬಲ ಇರುವ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸರ್ವ ರೀತಿಯಲ್ಲೂ ಸಿದ್ಧತೆ ನಡೆಸುತ್ತಿವೆ.

ಹೀಗಿರುವಾಗಲೇ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ.

ನಾಗ್ಪುರ ನೈರುತ್ಯ ಕ್ಷೇತ್ರದಿಂದ ಡಿಸಿಎಂ ದೇವೇಂದ್ರ ಫಡ್ನವೀಸ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ವಂಡ್ರೆ ಪಶ್ಚಿಮ ಕ್ಷೇತ್ರದಿಂದ ಆಶೀಶ್‌ ಸೀಲರ್‌, ಕಂಕವಾಲಿ ಕ್ಷೇತ್ರದಿಂದ ನಿರೇಶ್‌ ರಾಣೆ ಮತ್ತೆ ಕಣಕ್ಕಿಳಿಯಲಿದ್ದಾರೆ.

ಸಿಎಂ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಹಾಗೂ ಡಿಸಿಎಂ ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿಯೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಕನಿಷ್ಠ 150 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಜೆಪಿ ಪ್ಲಾನ್‌ ರೂಪಿಸಿದೆ.

Tags:
error: Content is protected !!