ಮಂಡ್ಯ: ಕಳೆದ ನಾಲ್ಕೈದು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮನೆಯೋಂದು ಕುಸಿತವಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪಾರ್ವತಮ್ಮ ಎಂಬುವವರಿಗೆ ಸೇರಿದ ಮನೆ ಇದಾಗಿದೆ.
ಕಳೆದ ನಾಲ್ಕು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಮನೆ ಸಂಪೂರ್ಣ ಕುಸಿತ ಕಂಡಿದೆ. ಘಟನೆಯಲ್ಲಿ ಪಾರ್ವತಮ್ಮ ಪ್ರಾಣಾಪಾಯದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.
ಮನೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸಂಪೂರ್ಣ ನಾಶವಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಪಾರ್ವತಮ್ಮ ಆಗ್ರಹಿಸಿದ್ದಾರೆ.