ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ನಿನ್ನೆ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ನಿನ್ನೆ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಆದರೆ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಯಲ್ಲಿ ನದಿಯಂತೆ ನೀರು ಹರಿಯುತ್ತಿತ್ತು. ಪರಿಣಾಮ ವಾಹನ ಸವಾರರು ಮುಂದೆ ಹೋಗಲಾಗದೇ ತೀವ್ರ ಪರದಾಟ ನಡೆಸಿದರು.
ಇನ್ನು ನಿನ್ನೆ ಭಾನುವಾರವಾದ ಹಿನ್ನೆಲೆಯಲ್ಲಿ ಕೊಡಗು ಪ್ರವಾಸಿ ತಾಣಗಳಿಗೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರು.
ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದ ಪರಿಣಾಮ ಪ್ರವಾಸಿಗರು ಕೂಡ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.