ಮೈಸೂರು: ಮುಡಾ ಪ್ರಕರಣದಲ್ಲಿ ಸಂಕಷ್ಟಗಳು ಬೆನ್ನು ಹತ್ತಿರುವ ಮಧ್ಯೆ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ದೊಡ್ಡ ಉಡುಗೊರೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿಧಾನಸಭಾ ಕ್ಷೇತ್ರಕ್ಕೆ 486.98 ಕೋಟಿ ರೂಪಾಯಿ ಹಣ ಘೋಷಿಸಿದ್ದು, ಹಲವು ಕಾಮಗಾರಿಗಳಿಗೆ ನಾಳೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಮುಡಾ ಸಂಕಷ್ಟದ ನಡುವೆಯೂ ಸಿಎಂ ಸಿದ್ದರಾಮಯ್ಯ ತಮ್ಮ ವರುಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮ ವಹಿಸುತ್ತಿದ್ದು, ನಾಳೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.