ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಸಿ.ಪಿ.ಯೋಗೇಶ್ವರ್ ಸೋಮವಾರ ಬಿಜೆಪಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು(ಅ.21) ಸುಮಾರು ನಾಲ್ಕು ಗಂಟೆಗೆ ಹುಬ್ಬಳ್ಳಿಗೆ ತೆರಳಿದ ಯೋಗೇಶ್ವರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಹುಬ್ಬಳ್ಳಿ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಬಳಿಕ, ನಾನು ನನ್ನ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ತಮ್ಮ ಲೆಟರ್ ಹೆಡ್‌ನಲ್ಲಿ ಬರೆದುಕೊಟ್ಟು ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಈ ಪತ್ರವನ್ನು ಸ್ವೀಕಾರಿಸಿದ ಬಸವರಾಜ ಹೊರಟ್ಟಿ ಅವರು ಅಂಗೀಕರಿಸಿದ್ದಾರೆ.





