ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಟೆನ್ಷನ್ ಮಧ್ಯೆಯೂ ಸಿಎಂ ಸಿದ್ದರಾಮಯ್ಯ ಅವರಿಂದು ಸ್ವಕ್ಷೇತ್ರ ವರುಣಾದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರಕ್ಕೆ 486.98 ಕೋಟಿ ರೂ ಹಣವನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಕ್ಷೇತ್ರವಾದ್ದರಿಂದ ವರುಣಾ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮುಡಾ ಟೆನ್ಷನ್ ನಡುವೆಯೂ ಸಿದ್ದರಾಮಯ್ಯ ಅವರು ಕ್ಷೇತ್ರದ ಅಭಿವೃದ್ಧಿಗೆ ಪಣ ತೊಟ್ಟಿದ್ದು, ಜನತೆಯ ಮೆಚ್ಚುಗೆಗೆ ಪಾತ್ರವಾಗಿದೆ.