ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್.28ಕ್ಕೆ ಮುಂದೂಡಿಕೆ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹೈಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಯು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ನಡೆಯಿತು.
ಈ ವೇಳೆ ವಾದ ಮಂಡಿಸಿದ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು, ದರ್ಶನ್‌ಗೆ ಬೆನ್ನು ಹುರಿ ನೋವಿದೆ. ಆದ ಕಾರಣ ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲಿ ಎಂಆರ್‌ಐ ಸ್ಕ್ಯಾನ್ ಮಾಡಲಾಗಿದ್ದು, ಬೆನ್ನು ಹುರಿಯ ಸರ್ಜರಿ ಮಾಡಬೇಕೆಂದು ವೈದ್ಯರು ಹೇಳಿದ್ದಾರೆ.
ಹೀಗಾಗಿ ಅನಾರೋಗ್ಯದ ಕಾರಣಕ್ಕೆ ಜಾಮೀನು ನೀಡಬೇಕು ಎಂದು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು.
ಜೈಲು ಅಧಿಕಾರಿಗಳಿಂದ ವೈದ್ಯಕೀಯ ವರದಿ ಕೇಳಿದ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್.28ಕ್ಕೆ ಮುಂದೂಡಿಕೆ ಮಾಡಿದೆ.