ಮೈಸೂರು: ಸ್ವಕ್ಷೇತ್ರ ವರುಣಾದಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು.
ಸುಮಾರು 501.81 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಇವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರಿಂದು ಗುದ್ದಲಿಪೂಜೆ ನೆರವೇರಿಸಿದರು.
ರಸ್ತೆ, ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ, ಚರಂಡಿ, ಸಮುದಾಯ ಭವನಗಳ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ ರೈತರಿಗೆ ಕೃಷಿ ಯಂತ್ರೋಪಕರಣ ವಿತರಿಸಿ ಖುಷಿ ಪಟ್ಟರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವರುಗಳಾದ ವೆಂಕಟೇಶ್, ಬೋಸರಾಜು, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.