Mysore
24
haze

Social Media

ಶುಕ್ರವಾರ, 30 ಜನವರಿ 2026
Light
Dark

ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ

ಮೈಸೂರು: ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪ್ರಿಯಾಂಕಾ ಗಾಂಧಿ ನಾಳೆ ( ಅಕ್ಟೋಬರ್‌ 23 ) ನಾಮಪತ್ರ ಸಲ್ಲಿಸಲಿದ್ದು, ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ತಾಯಿ ಸೋನಿಯಾ ಗಾಂಧಿ ಜತೆ ಬಂದಿಳಿದಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬರಮಾಡಿಕೊಂಡಿದ್ದಾರೆ. ಇಂದು ನಗರದಲ್ಲಿಯೇ ವಾಸ್ತವ್ಯ ಹೂಡಲಿರುವ ಅವರು ನಾಳೆ ವಯನಾಡಿಗೆ ಪ್ರಯಾಣ ಬೆಳೆಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸಂಸದ ಸುನಿಲ್ ಬೋಸ್, ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿ ಹಲವು ಮಂದಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Tags:
error: Content is protected !!