ಮೈಸೂರು: ರಾಜ್ಯ ವಿಪತ್ತು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಬಹುತೇಕ ಕಡೆ ಜನರು ಮನೆಯಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಬಂದೊದಗಿರುವ ವಿಪತ್ತು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸಿಎಂ ಸೇರಿದಂತೆ ಎಲ್ಲಾ ಸಚಿವರು ಜನರ ಸಮಸ್ಯೆಗಳತ್ತ ಗಮನ ಹರಿಸಿಲ್ಲ. ಎಲ್ಲರೂ ಉಪಚುನಾವಣೆಯತ್ತ ಗಮನ ಹರಿಸಿದ್ದಾರೆ. ಜನರ ಕಷ್ಟಕ್ಕೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ರಾಜ್ಯ ಸರ್ಕಾರಕ್ಕೆ ಜನರ ಕಷ್ಟ ಅರ್ಥವಾಗುತ್ತಿಲ್ಲ. ರಾಜ್ಯದ ಜನತೆ ಶೋಚನೀಯ ಸ್ಥಿತಿಗೆ ತಲುಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.