Mysore
14
overcast clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಗ್ಯಾಂಗ್‌ಸ್ಟಾರ್‌ ʼಛೋಟಾ ರಾಜನ್‌ʼ ಜಾಮೀನು ಮಂಜೂರು ಮಾಡಿದ ಬಾಂಬೆ ಕೋರ್ಟ್‌

ಮುಂಬೈ: ಹೋಟೆಲ್‌ ಉದ್ಯಮಿ ಜಯಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟಾರ್‌ ಛೋಟಾ ರಾಜನ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬಾ ಹೈಕೋರ್ಟ್‌ ಬುಧವಾರ ಅಮಾನತುಗೊಳಿಸಿದೆ. ಈ ಪ್ರಕರಣದಲ್ಲಿ ಆತನಿಗೆ ಜಾಮೀನು ನೀಡಿದೆ.

ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್‌ ಚವಾಣ್‌ ಅವರಿದ್ದ ದ್ವಿಸದಸ್ಯ ಪೀಠವು ಜಾಮೀನು ನೀಡಿದ್ದು, ಜಾಮೀನಿಗಾಗಿ 1 ಲಕ್ಷ ರೂ ಬಾಂಡ್‌ ನೀಡುವಂತೆ ಛೋಟಾ ರಾಜನ್‌ಗೆ ಸೂಚಿಸಿದೆ. ಈ ಪ್ರಕರಣದಲ್ಲಿ ಆತನಿಗೆ ಜಾಮೀನು ಸಿಕ್ಕರು ಇತರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆ ಜೈಲಿನಲ್ಲೇ ಉಳಿಯುವುದು ಅನಿವಾರ್ಯ ಎಂದು ತೀರ್ಪು ಪ್ರಕಟಿಸಿದೆ.

2011 ರಲ್ಲಿ ಪತ್ರಕರ್ತ ಜೆಡೇ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಛೋಟಾ ರಾಜನ್‌ನನ್ನು ದೆಹಲಿಯ ತಿಹಾರ್‌ ಜೈಲಿನಲ್ಲಿ ಇರಿಸಲಾಗಿದೆ. ಆತ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾನೆ. ಬಂಧನದಿಂದ ತಪ್ಪಿಸಿಕೊಳ್ಳುವ ಕುಖ್ಯಾತಿ ಪಡೆದಿದ್ದ ಛೋಟಾ ರಾಜನ್‌ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಬಳಿಕ 2015ರಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ಆತನನ್ನು ಬಂಧಿಸಲಾಯಿತು.

Tags:
error: Content is protected !!