ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ಸಂಭವಿಸಿದ್ದ ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ವೇಳೆ ಪ್ರತಿಕ್ರಿಯಿಸಿದ ಅವರು, ಇದು ಮಳೆಯಿಂದ ಸಂಭವಿಸಿದ ಘಟನೆ ಅಲ್ಲ. ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿದು ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, 8 ಜನರನ್ನು ರಕ್ಷಣೆ ಮಾಡಲಾಗಿದೆ.
ಗಾಯಾಳುಗಳಿಗೆಲ್ಲಾ ಸರ್ಕಾರದಿಂದಲೇ ವೈದ್ಯಕೀಯ ವೆಚ್ಚ ಭರಿಸುತ್ತೇವೆ. ಗಾಯಾಳುಗಳು ಸಂಪೂರ್ಣ ಚೇತರಿಸಿಕೊಂಡ ಬಳಿಕ ಅವರಿಗೂ ಕೂಡ ಸರ್ಕಾರದಿಂದ ಪರಿಹಾರ ವಿತರಣೆ ಮಾಡುತ್ತೇವೆ ಎಂದು ಭರವಸೆ ನೀಡಿದರು.