Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಉಪ ಚುನಾವಣೆ: ಶಿಗ್ಗಾಂವಿ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್

ಹಾವೇರಿ: ಇಲ್ಲಿಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ತನ್ನ ಅಭ್ಯರ್ಥಿ ಹೆಸರನ್ನು ಗುರುವಾರ ಘೋಷಿಸಿದೆ.

2023ರ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿ ಪರಾಭಾವಗೊಡಿದ್ದ ಯಾಸೀರ್‌ ಅಹ್ನದ್‌ ಖಾನ್‌ ಪಠಾಣ ಅವರಿಗೆ ಕಾಂಗ್ರೆಸ್‌ ಈ ಬಾರಿಯ ಉಪ ಚುನಾವಣೆಯಲ್ಲಿ ಟಿಕೆಟ್‌ ನೀಡಿದೆ.

ಇಲ್ಲಿಯ ಕ್ಷೇತ್ರಕ್ಕೆ ಲಿಂಗಾಯತ ಸಮುದಾಯಕ್ಕೆ ಟಿಕೆಟ್‌ ನೀಡುವ ಬಗ್ಗೆ ಚರ್ಚೆಗಳು ನಡೆದಿದ್ದವು. ಆದರೆ, ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ನೀಡಲು ಒತ್ತಾಯ ಹೆಚ್ಚಿದ್ದವು. ಇದೇ ಕಾರಣಕ್ಕೆ ಈ ಬಾರಿಯ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಯಾಸೀರ್‌ ಅಹ್ಮದ್‌ ಖಾನ್‌ ಪಠಾಣ ಅವರಿಗೆ ಟಿಕೆಟ್‌ ನೀಡಲಾಗಿದೆ ಎನ್ನಲಾಗಿದೆ.

ಬಿಜೆಪಿಯು ಬಸವರಾಜ ಬೊಮ್ಮಾಯಿ ಮಗ ಭರತ್‌ ಬೊಮ್ಮಾಯಿಯನ್ನು ಇಲ್ಲಿ ಕಣಕ್ಕಿಳಿಸಿದೆ.

Tags: