Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ದೀಪಾವಳಿ: KSRTCಯಿಂದ 2000 ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುಮಾರು 2000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಿದೆ.

ಅಕ್ಟೋಬರ್‌ 31 ರಂದು ನರಕ ಚತುರ್ದಶಿ, ನವೆಂಬರ್‌ 1 ಕನ್ನಡ ರಾಜ್ಯೋತ್ಸವ ಹಾಗೂ ನವೆಂಬರ್‌ 2 ರಂದು ಬಲಿಪಾಡ್ಯಮಿ(ದೀಪಾವಳಿ) ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 31 ರಿಂದ ನವೆಂಬರ್‌ 2 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 2000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದೆ. ಜೊತೆಗೆ ನವೆಂಬರ್‌ 3 ಮತ್ತು 4 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ಸೇವೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಿಂದ;ಎಲ್ಲಿಗೆ?
ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್‌ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ.

ಧರ್ಮಸ್ಥಳ, ಕುಕ್ಕೆ ಸುಬ್ರಹಣ್ಮ, ಶಿವಮೊಗ್ಗ, ಹಾಸನ,ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ಮೈಸೂರು,ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಹಾಗೂ ಹೊರರಾಜ್ಯಗಳಾದ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್‌, ತಿರುಚ್ಚಿ, ಪಾಲಕ್ಕಡ್‌, ತ್ರಿಶೂರ್‌, ಎನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಪ್ರಯಾಣಿಕರು ಬಸ್‌ ನಿಲ್ದಾಣ, ಪಿಕ್‌ಅಪ್‌ ಪಾಯಿಂಟ್‌ ಮಾಹಿತಿಯನ್ನು ಗಮನಿಸುವಂತೆ ಮನವಿ ಮಾಡಲಾಗಿದೆ.

ಟಿಕೆಟ್‌ ಬುಕ್ಕಿಂಗ್‌ ಹೇಗೆ?
www.ksrtc.karnataka.gov.in  ವೆಬ್‌ಸೈಟ್‌ ಮೂಲಕ ಇ-ಟಿಕೆಟ್‌ ಬುಕಿಂಗ್‌ ಮಾಡಬಹುದಾಗಿದೆ. ಒಬ್ಬರು ನಾಲ್ಕಕ್ಕಿಂತ ಹೆಚ್ಚು ಟಿಕೆಟ್‌ ಬುಕ್ಕಿಂಗ್‌ ಮಾಡಿದರೆ ಶೇ5ರಷ್ಟು ರಿಯಾಯಿತಿ ಸಿಗಲಿದೆ. ಜೊತೆಗೆ ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಬರುವ ಪ್ರಯಾಣ ದರದಲ್ಲಿ ಶೇ10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Tags: