Mysore
25
scattered clouds

Social Media

ಮಂಗಳವಾರ, 05 ನವೆಂಬರ್ 2024
Light
Dark

ಜಲ್ಲಿಪಾಳ್ಯ – ಕೊಳ್ಳೇಗಾಲ ನಡುವೆ ಹೊಸ ಸಾರಿಗೆ ಸೇವೆ

ಹನೂರು: ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ಅಧಿಕಾರಿಗಳು ಸಕಾಲಕ್ಕೆ ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಜಲ್ಲಿಪಾಳ್ಯ ಗ್ರಾಮದಿಂದ ಹೊಸದಾಗಿ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.

ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲ್ಲಿಪಾಳ್ಯ, ನಾಲ್ ರೋಡ್, ರಾಮಾಪುರ ಮಾರ್ಗ ವಾಗಿ ಕೊಳ್ಳೇಗಾಲಕ್ಕೆ ತೆರಳುವ ಹೊಸ ರೂಟ್ ಬಸ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಂಚಿನ ಗ್ರಾಮಗಳು ಹೆಚ್ಚಾಗಿವೆ. ಆದರೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿತ್ತು.

ಈ ಸಂಬಂಧ ಗ್ರಾಮಸ್ಥರು ನಮ್ಮ ಭಾಗಕ್ಕೆ ಹೊಸ ಬಸ್ ಬಿಡಿಸುವಂತೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಹೊಸ ರೂಟ್ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪ್ರತಿ ಹಳ್ಳಿಗೂ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದರು. ತಮಿಳು ನಾಡು ಹಾಗೂ ಕರ್ನಾಟಕ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಗುಡ್ಡೆಯೂರು ಗ್ರಾಮದ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಲು ಅಂದಿಯೂರು ಕ್ಷೇತ್ರದ ಶಾಸಕರ ಸಹಕಾರ ಕೋರಲಾಗುವುದು ಎಂದರು. ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕ ಶಂಕರ್, ಚರಣ್ ಗ್ರಾಪಂ ಸದಸ್ಯರಾದ ಪಳನಿಸ್ವಾಮಿ, ಶಿವಣ್ಣ, ಮಾದೇಶ್ ಮುಖಂಡರು ಹಾಜರಿದ್ದರು.

 

Tags: