Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ದೀಪಾವಳಿ ಹಬ್ಬಕ್ಕೆ 2000 ಅಧಿಕ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ

ಬೆಂಗಳೂರು: ವಾರದ ಕೊನೆಯ ಮೂರು ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆಗಳಿದ್ದು, ಊರಿಗೆ ತೆರಳುವ ಪ್ರಯಾಣಿಕರಿಗಾಗಿ 2000ಕ್ಕೂ ಅಧಿಕ ಬಸ್‌ ವ್ಯವಸ್ಥೆಯನ್ನು ಮಾಡಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

ನವೆಂಬರ್‌ 1ಕ್ಕೆ ಕನ್ನಡ ರಾಜ್ಯೋತ್ಸವ ನ.2 ರಂದು ದೀಪಾವಳಿ ಮತ್ತು ನ.3 ರಂದು ಭಾನುವಾರವಾಗಿರುವ ಹಿನ್ನೆಲೆಯಲ್ಲಿ ಜನರು ತಮ್ಮ ಊರಿಗೆ ಅಥವಾ ಪ್ರವಾಸಕ್ಕೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರಲಿದೆ. ಹೀಗಾಗಿ ಕೆಎಸ್‌ಆರ್‌ಟಿಸಿಯು ಸಾರ್ವಜನಿಕರಿಗಾಗಿ ಅಧಿಕ ಬಸ್‌ ವ್ಯವಸ್ಥೆಯನ್ನು ಮಾಡಿದೆ. ಅಲ್ಲದೇ, ಅಕ್ಟೋಬರ್‌ 30ರಿಂದ ನವೆಂಬರ್‌ 2ರವರೆಗೆ ಒಟ್ಟು 4 ದಿನಗಳ ಕಾಲ ಬೆಂಗಳೂರಿನಿಂದ ಬೇರೆ ಬೇರೆ ಜಿಲ್ಲೆಗಳಿಗೆ ಹಾಗೂ ನ.3 ಮತ್ತು ನ.4 ರಂದು ವಿವಿಧಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಈ ಬಸ್‌ಗಳು ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಹಾಗೂ ಶಾಂತಿನಗರದ ಬಿಎಂಟಿಸಿ ಬಸ್‌ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ. ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಶೃಂಗೇರಿ, ಕುಂದಾಪುರ, ಹುಬ್ಬಳ್ಳಿ, ದಾವರಣಗೆರೆ, ಹೊರನಾಡು, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಕಾರವಾರ, ಶಿರಸಿ, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್‌, ಯಾದವಗಿರಿ, ವಿಜವಾಡ, ಹೈದರಾಬಾದ್‌ ಹಾಗೂ ತಿರುಪತಿ ಸೇರಿದಂತೆ ಇನ್ನಿತರ ಸ್ಥಳಗಳಿಗೆ ವಿಶೇಷ ಬಸ್‌ ವ್ಯವಸ್ಥೆ ಮಾಡಿದೆ.

Tags: