Mysore
27
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕನ್ನಡದ ಹುಡುಗನ ಪ್ರೀತಿಯಲ್ಲಿ ಬಿದ್ದ ಮರಾಠಿ ಹುಡುಗಿ

ಕನ್ನಡ ಕಿರುತೆರೆಯಲ್ಲಿ ‘ಅಗ್ನಿಸಾಕ್ಷಿ’, ‘ನಾಗಿಣಿ’, ‘ಕಮಲಿ’ ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿರುವ ಹಯವದನ, ಇದೀಗ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಅವರೀಗ ಸದ್ದಿಲ್ಲದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರವು ಸದ್ಯದಲ್ಲೇ ಬಿಡುಗಡೆ ಆಗಲಿದೆ.

ಈ ಹಿಂದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ‘ಹುಲಿಯಾ’ ಎಂಬ ಹಾಡಿ ಬಿಡುಗಡೆಯಾಗಿತ್ತು. ಇದೀಗ, ‘ಜಾಣಮರಿ’ ಎಂಬ ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ಜಂಕಾರ್‍ ಮ್ಯೂಸಿಕ್‌ ಯೂಟ್ಯೂಬ್‌ ಚಾನಲ್‍ನಲ್ಲಿ ‘ಜಾಣಮರಿ’ ಗೀತೆ ಬಿಡುಗಡೆ ಮಾಡಲಾಗಿದೆ. ಪ್ರಮೋದ್‌ ಮರವಂತೆ ಸಾಹಿತ್ಯ ರಚಿಸಿರುವ ಈ ಹಾಡಿಗೆ ರಕ್ಷಿತಾ ಸುರೇಶ್‌ ಹಾಗೂ ವಿಶಾಕ್‌ ನಾಗಲಾಪುರ ಧ್ವನಿಯಾಗಿದ್ದಾರೆ. ಶಿಯೋಮ್‌ ಸಂಗೀತ ಸಂಯೋಜಿಸಿದ್ದಾರೆ.

‘ಜಾಣಮರಿ’ ಹಾಡಿನಲ್ಲಿ ಅಂಜನ್ ನಾಗೇಂದ್ರ ಹಾಗೂ ವೆನ್ಯಾ ರೈ ಜೋಡಿಯಾಗಿ ಮಿಂಚಿದ್ದಾರೆ. ಕನ್ನಡ ಹುಡುಗನಾಗಿ ಅಂಜನ್‌ ಕಾಣಿಸಿಕೊಂಡರೆ, ವೆನ್ಯಾ ರೈ ಮರಾಠಿ ಹುಡುಗಿಯಾಗಿ ಅಭಿನಯಿಸಿದ್ದಾರೆ. ಮಹಾರಾಷ್ಟ್ರದ ಪಂಢರಪುರದಲ್ಲಿ ಇಡೀ ಹಾಡನ್ನು ಚಿತ್ರೀಕರಣ ಮಾಡಿರುವುದು ವಿಶೇಷ. ನಾಯಕ ಹಾಗೂ ನಾಯಕಿ ನಡುವಿನ ಸುಮಧುರ ಪ್ರೇಮಗೀತೆ ಇದಾಗಿದ್ದು, ಸಂಗೀತ ಪ್ರಿಯರನ್ನು ಗಮನ ಸೆಳೆದಿದೆ.

‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದಲ್ಲಿ ಸಂಜನಾ ದಾಸ್ ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಬಿರಾದರ್, ಶರತ್ ಲೋಹಿತಾಶ್ವ, ದಾನಪ್ಪ, ಸ್ವಾತಿ, ದಿನೇಶ್ ಮಂಗಳೂರು, ಲಕ್ಷ್ಮೀ ನಾಡಗೌಡ ಮುಂತಾದವರು ನಟಿಸಿರುವ ಈ ಚಿತ್ರದಲ್ಲಿ ಅಪ್ಪ-ಮಗನ ಬಾಂಧವ್ಯದ ಎಳೆ ಇದೆ. ಈ ಚಿತ್ರಕ್ಕೆ ಬೆಂಗಳೂರಿನಿಂದ ಕಾಶ್ಮೀರದವರೆಗೂ ಚಿತ್ರೀಕರಣ ಮಾಡಲಾಗಿದ್ದು, ಹಲವು ರಾಜ್ಯಗಳಲ್ಲಿ ಚಿತ್ರೀಕರಣ ಮಾಡಿರುವುದು ವಿಶೇಷ.

‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರವನ್ನು ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಮತ್ತು ಕೃಷ್ಣಛಾಯಾ ಚಿತ್ರ ಸಂಸ್ಥೆಗಳ ಮೂಲಕ ಪವನ್ ಸಿಮಿಕೇರಿ ಹಾಗೂ ಸಿಂಧು ಹಯವದನ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಛಾಯಾಗ್ರಹಣವಿದೆ.

Tags: