ಧಾರವಾಡ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ಈ ಬಗ್ಗೆ ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ ಸರ್ಕಾರದ ವರ್ಚಸ್ಸು ಕುಸಿದು ಹೋಗಿದೆ. ಸಿಎಂ ಸಿದ್ದರಾಮಯ್ಯರ ಇಮೇಜ್ ಕೂಡ ಹಾಳಾಗುತ್ತಿದೆ. ಆದ್ದರಿಂದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.