Mysore
24
overcast clouds

Social Media

ಸೋಮವಾರ, 08 ಜೂನ್ 2026
Light
Dark

ಪ್ರವಾಹಕ್ಕೆ ನಲುಗಿದ ಒಡಿಶಾ: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಭದ್ರಕ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಲುಕಿಕೊಂಡಿದ್ದ 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದರಲ್ಲಿ ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರೀಕರು ಸೇರಿದಂತೆ 24 ಮಂದಿಯನ್ನು ಮೋಟಾರು ದೋಣಿಗಳ ಸಹಾಯದಿಂದ ರಕ್ಷಣೆ ಮಾಡಲಾಗಿದೆ.

ರಕ್ಷಿಸಿದವರೆಲ್ಲರನ್ನು ನಿರಾಶ್ರಿತರ ಕೇಂದ್ರಗಳಿಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ ಒಡಿಶಾದಲ್ಲಿ ಡಾನಾ ಚಂಡಮಾರುತದ ತೀವ್ರತೆ ಕಡಿಮೆಯಾಗಿದ್ದು, ಮುಂದಿನ 12 ಗಂಟೆಗಳ ಕಾಲ ಸೈಕ್ಲೋನ್‌ ತೀವ್ರತೆ ಮತ್ತಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Tags:
error: Content is protected !!