Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ರಂಗೇರಿದ ಶಿಗ್ಗಾಂವಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಮತಯಾಚನೆ

ಹಾವೇರಿ: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಿಗ್ಗಾಂವಿ ಕ್ಷೇತ್ರದಲ್ಲಿಂದು ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಅಬ್ಬರದ ಪ್ರಚಾರ ನಡೆಸಿದರು.

ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಮಣ್ಣೂರು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ಭರತ್‌ ಬೊಮ್ಮಾಯಿ ಅವರು, ಬಸವರಾಜ ಬೊಮ್ಮಾಯಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಣೆ ನೀಡಿದರು.

ಬಳಿಕ ಮಧ್ಯಾಹ್ನದ ವೇಳೆಗೆ ತೆಗ್ಗಿಹಳ್ಳಿ ಗ್ರಾಮದಲ್ಲಿ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಸಿ ಮತಯಾಚಿಸಿದರು.

ಬಳಿಕ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಕೊಟ್ಟಿರೋದು ತಾತ್ಕಾಲಿಕ ಗ್ಯಾರಂಟಿ. ನಾವು ಪರ್ಮನೆಂಟ್‌ ಗ್ಯಾರಂಟಿ ನೀಡಿದ್ದೇವೆ. ನಮ್ಮ ಕ್ಷೇತ್ರದ 5000ಕ್ಕೂ ಅಧಿಕ ಹೆಣ್ಣುಮಕ್ಕಳಿಗೆ ಕೆಲಸ ಕೊಟ್ಟಿದ್ದೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

Tags:
error: Content is protected !!