Mysore
30
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಹಿರಿಯರ ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಕಾರ್ಯಕ್ರಮ

ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಕಾರ್ಯಕ್ರಮವನ್ನು  ೨೦೧೦ರಲ್ಲಿ ಆರಂಭಿಸಲಾಯಿತು. ಈ ಯೋಜನೆ ಹಿರಿಯರಿಗೆ ಆರೋಗ್ಯ ಸೇವೆಗಳನ್ನು ನೀಡುತ್ತದೆ. ಇದರಿಂದ ಅವರು ತಮ್ಮ ದೈಹಿಕ ಮತ್ತು ಮಾನಸಿಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಬಹುದು.

ಹಿರಿಯ ನಾಗರಿಕರು ತಮಗೆ ಅಗತ್ಯವಿರುವ ವೈದ್ಯಕೀಯ ಆರೈಕೆಯನ್ನು ಈ ಯೋಜನೆಯಿಂದ ಪಡೆದುಕೊಳ್ಳುತ್ತಾ, ಸ್ವತಂತ್ರ ಜೀವನವನ್ನು ನಡೆಸಬೇಕೆಂಬ ಉದ್ದೇಶದಿಂದ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ.

ರಾಷ್ಟ್ರಾದ್ಯಂತ ಜಿಲ್ಲಾ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಉಪ ಕೇಂದ್ರಗಳ ವಾಪ್ತಿಯಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಹಿರಿಯ ನಾಗರಿಕರ ಆರೋಗ್ಯ ಕೇಂದ್ರ ಬದ್ಧವಾಗಿದೆ. ರಾಜ್ಯ ಆರೋಗ್ಯ ಸಂಸ್ಥೆಯ ಮೂಲಕ ಎಲ್ಲ ಹಂತಗಳಲ್ಲಿಯೂ ಅಗತ್ಯ ಆರೋಗ್ಯ ಸೌಲಭ್ಯಗಳು ಸುಲಭವಾಗಿ ದೊರೆಯುವಂತೆ ಮಾಡಲಾಗಿದೆ. ಈ ಕಾರ್ಯಕ್ರಮವು ಸರ್ಕಾರದ ಹಿರಿಯ ನಾಗರಿಕ ಪಿಂಚಣಿ ಯೋಜನೆಯ ಭಾಗವಾಗಿದೆ. ಒಟ್ಟಾರೆಯಾಗಿ, ಹಿರಿಯ ನಾಗರಿಕರು ಅತ್ಯಂತ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಈ ಯೋಜನೆಯಿಂದಾಗಿ ಪಡೆಯಬಹುದು.

 

Tags:
error: Content is protected !!