Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಹಬ್ಬಕ್ಕೆ ಭರ್ಜರಿ ಸಿದ್ಧತೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.

ಈಗಾಗಲೇ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ ಸಭೆ ನಡೆದಿದ್ದು, ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಸಮ್ಮೇಳನದ ಯಶಸ್ವಿಗೆ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ಸಾಹಿತ್ಯ ಸಮ್ಮೇಳನದ ಕುರಿತು ಮಾಧ್ಯಮದಲ್ಲಿ ವ್ಯಾಪಕ ಪ್ರಚಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಮಾಧ್ಯಮದವರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದು ಕನ್ನಡದ ಹಬ್ಬವಾಗಿರುವುದರಿಂದ ಎಲ್ಲರ ಸಹಕಾರ ಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಕೂಡ ಹೆಚ್ಚಿನ ಪ್ರಚಾರ ನೀಡಿ ಸಕ್ಕರೆ ನಾಡಿನ ಘಮಲನ್ನು ಎಲ್ಲಾ ಕಡೆ ಪಸರಿಸುವಂತೆ ಕರೆ ನೀಡಿದ್ದಾರೆ.

ಇನ್ನು ರಾಜ್ಯ, ರಾಷ್ಟ್ರದ ನಾನಾ ಭಾಗಗಳಿಂದ ಬರುವವರಿಗೆ ಸಕಲ ವ್ಯವಸ್ಥೆ ಮಾಡಲಾಗಿದ್ದು, ಊಟ, ಪುಸ್ತಕ ಮಳಿಗೆ, ವೇದಿಕೆ ಒಂದೇ ಕಡೆ ಇರುವಂತೆ ಜಾಗ ಗುರುತಿಸಲಾಗಿದೆ.

ಇನ್ನು ಪ್ರಮುಖವಾಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದ್ದು, ನುಡಿ ಜಾತ್ರೆಗೆ ಭರ್ಜರಿ ಸಿದ್ಧತೆ ಕೈಗೊಳ್ಳಲಾಗಿದೆ.

 

 

Tags: