Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಪ್ರಧಾನಿ ನರೇಂದ್ರ ಮೋದಿಗೆ ಮತ್ತೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರ: ಸುಳ್ಳು ಆರೋಪ ಸಾಬೀತು ಮಾಡಿದರೆ, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಮತ್ತೆ ಸವಾಲು ಹಾಕಿದ್ದಾರೆ.

ಈ ಕುರಿತು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಂಡರಪುರ ಮಂಗಳ್‌ ವೇಡಾದಲ್ಲಿ ಆಯೋಜಿಸಿದ್ದ ರಾಜ್ಯ ಕಾಂಗ್ರೆಸ್‌ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಇಲ್ಲಿ ಕಾಂಗ್ರೆಸ್‌ ಗೆಲ್ಲಿಸಬೇಕು ಎಂದು ಜನತೆಗೆ ಕರೆ ನೀಡಿದರು.

ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಅಂಬಾನಿ, ಅದಾನಿಯವರ ಸಂಪತ್ತು ಹೆಚ್ಚಿಸಲು ಕೆಲಸ ಮಾಡುತ್ತಿದ್ದಾರೆ. ಆದರೆ ಬಡವರ, ರೈತರ, ಕಾರ್ಮಿಕರ, ಶ್ರಮಿಕರ ಬದುಕನ್ನು ಸುಧಾರಿಸಲು ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಿಲ್ಲ ಎಂದು ಕಿಡಿಕಾರಿದರು.

ಸ್ವಾತಂತ್ರ್ಯ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಬಂದಿರಲಿಲ್ಲ. ಅಬಕಾರಿ ಇಲಾಖೆಯಲ್ಲಿ 700 ಕೋಟಿ ಲಂಚ ಪಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಚುನಾವಣೆ ನಡೆಸುತ್ತಿದೆ ಎಂದು ಹಸಿಸುಳ್ಳು ಹೇಳಿದ್ದಾರೆ. ಇದನ್ನು ಸಾಬೀತು ಮಾಡಿದರೆ ನಾನು ಆ ಕ್ಷಣವೇ ರಾಜಕೀಯ ನಿವೃತ್ತಿ ಪಡೆಯಲು ಸಿದ್ಧ ಎಂದು ಸವಾಲು ಹಾಕಿದರು.

Tags:
error: Content is protected !!