Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ಓದುಗರ ಪತ್ರ: ಬ್ಯಾಂಕುಗಳಲ್ಲಿ ಸ್ಥಳೀಯರಿಗೆ ಆದ್ಯತೆ ಸಿಗಲಿ

ಸ್ಥಳೀಯ ಭಾಷೆಗಳ ಜ್ಞಾನವಿರುವವರನ್ನು ಮಾತ್ರ ಗ್ರಾಮೀಣ ಬ್ಯಾಂಕುಗಳಿಗೆ ನೇಮಕ ಮಾಡಿಕೊಳ್ಳಲು ಅನುಕೂಲವಾಗುವಂತೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (RRB)ಗಳ ನಿಯಮಗಳನ್ನು ಮಾರ್ಪಡಿಸುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ನಡೆದ ದಕ್ಷಿಣ ವಲಯದ ಹತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಕಾರ್ಯಕ್ಷಮತೆ ಪರಿಶೀಲನಾ ಸಭೆಯಲ್ಲಿ ಸೂಚನೆ ನೀಡಿರುವುದಾಗಿ ವರದಿಯಾಗಿದೆ.

ಅಭ್ಯರ್ಥಿಗಳಲ್ಲಿ ಸ್ಥಳೀಯ ಭಾಷೆಯ ಜ್ಞಾನ ಮತ್ತು ಪ್ರಾವೀಣ್ಯತೆ ಖಚಿತಪಡಿಸಿಕೊಳ್ಳಲು ನೇಮಕಾತಿ ನಿಯಮಗಳನ್ನು ಪರಿಶೀಲಿಸಿ ಅವುಗಳನ್ನು ಅನುಕೂಲಕ್ಕೆ ತಕ್ಕಂತೆ ಮಾರ್ಪಡಿಸಿಕೊಳ್ಳಲು ಹಣಕಾಸು ಸೇವೆಗಳ ಇಲಾಖೆಯಿಂದ ಆದೇಶ ನೀಡಲಾಗಿದೆ. ಈ ಕೆಲಸ ಎಂದೋ ಆಗಬೇಕಿತ್ತು. ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಸದ್ಯ ಈಗಲಾದರೂ ಕ್ರಮ ತೆಗೆದುಕೊಂಡು ಸ್ಥಳೀಯ ಬ್ಯಾಂಕುಗಳಲ್ಲಿ ಸ್ಥಳೀಯ ಭಾಷಿಗರಿಗೆ ಆದ್ಯತೆ ನೀಡಬೇಕು ಎಂಬ ನಿಯಮ ಜಾರಿಗೆ ತರುತ್ತಿರುವುದು ಸ್ವಾಗತಾರ್ಹ. ಹಿಂದಿಯೇತರ ರಾಜ್ಯಗಳಲ್ಲಿ ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ ನಿಯಮ ಗ್ರಾಮೀಣ ಜನರಿಗೆ ಹೆಚ್ಚು ಅನುಕೂಲ ಮಾಡಿಕೊಡಲಿದೆ. ಅಲ್ಲದೆ ಅವರು ಬ್ಯಾಂಕ್ ವ್ಯವಹಾರವನ್ನು ಸುಲಭವಾಗಿ ಮಾಡಬಹುದಾಗಿದೆ. ಆದ್ದರಿಂದ ವಿತ್ತ ಸಚಿವರು ಇಂತಹ ನಿಯಮಗಳನ್ನು ಎಲ್ಲಾ ಬ್ಯಾಂಕುಗಳಿಗೂ ವಿಸ್ತರಿಸಲಿ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

Tags:
error: Content is protected !!