ಮೈಸೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಹೊಟ್ಟೆ ಉರಿ. ಹೀಗಾಗಿ ಸಿಎಂ ಕೆಳಗಿಳಿಸಲು ಟೇಡ್ ಫಿಕ್ಸ್ ಮಾಡುತ್ತಲೇ ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯರ ಮೇಲೆ ತನಿಖೆ ಮಾಡಿಸಲಿ. ಇ.ಡಿ, ಸಿಬಿಐನವರು ನಮ್ಮನ್ನ ಕೇಳಿ ತನಿಖೆ ಮಾಡುತ್ತಾರಾ ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಬದಲಾವಣೆ ಮಾತುಕತೆ ನಡೆದಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.