Mysore
27
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಭಾರತ ತಂಡದಲ್ಲಿ ಮರಳಿ ಸ್ಥಾನ ಪಡೆಯುವತ್ತ ಗುರಿ‌ಯಿಟ್ಟಿರುವ ಶ್ರೇಯಸ್‌ ಅಯ್ಯರ್

ಮುಂಬೈ: ನವೆಂಬರ್.23ರಂದು ನಡೆಯಲಿರುವ ಟಿ20 ಕ್ರಿಕೆಟ್‌ ಟೂರ್ನಿಗೆ ಮುಂಬೈ ತಂಡದ ನಾಯಕರಾಗಿ ಶ್ರೇಯಸ್‌ ಅಯ್ಯರ್‌ ಅವರನ್ನು ಮುಂಬೈ ಕ್ರಿಕೆಟ್‌ ಸಂಸ್ಥೆ ನೇಮಕ ಮಾಡಲಾಗಿದೆ.

2023ರ ಏಕದಿನ ವಿಶ್ವಕಪ್‌ ನಂತರ ಅವರು ಗಾಯದ ಸಮಸ್ಯೆಯಿಂದ ಭಾರತ ಕ್ರಿಕೆಟ್‌ ತಂಡದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಈಗ ಗಾಯದ ಸಮಸ್ಯೆಯಿಂದ ಹೊರಬಂದಿರುವ ಅವರು ಭಾರತ ತಂಡದಲ್ಲಿ ಮತ್ತೆ ತಮ್ಮ ಕ್ರಿಕೆಟ್‌ ಇನ್ನಿಂಗ್ಸ್‌ ಆರಂಭಿಸುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.

ಡೊಮೆಸ್ಟಿಕ್‌ ಟೂರ್ನಿಗಳಲ್ಲಿ ಅತ್ಯುತ್ತಮ ಲಯದಲ್ಲಿರುವ ಶ್ರೇಯಸ್‌ ಅಯ್ಯರ್‌ ರಣಜಿ ಟೂರ್ನಿಯಲ್ಲಿ ಮುಂಬೈ ತಂಡದ ಪರವಾಗಿ 452 ರನ್‌ ಗಳಿಸಿದರು. ಒಡಿಶಾ ತಂಡದ ಎದುರು 233 ರನ್‌ ಗಳಿಸಿದ್ದರು.

ಇದೇ ತಿಂಗಳು ನಡೆಯುವ ಸೈಯದ್‌ ಮುಷ್ತಾಕ್‌ ಟಿ20 ಟೂರ್ನಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸುವ ಜೊತೆಗೆ ವೈಯುಕ್ತಿಕವಾಗಿಯೂ ತಮ್ಮ ಸಾಮರ್ಥ್ಯ ತೋರಿಸಿ ಭಾರತ ತಂಡದ ಜೆರ್ಸಿ ತೊಡಲು ಸಿದ್ದವಾಗಿದ್ದಾರೆ.

ರಣಜಿ ಕ್ರಿಕೆಟ್‌ ಟೂರ್ನಿಯಲ್ಲಿ ಮುಂಬೈ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಅಜಿಂಕ್ಯ ರಹಾನೆ ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Tags:
error: Content is protected !!