Mysore
27
haze

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ರಾತ್ರೋರಾತ್ರಿ ಲೋಕಾಯುಕ್ತ ಎಸ್‌ಪಿ ಕಚೇರಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಬಾಮೈದ

ಮೈಸೂರು: ನೋಟಿಸ್‌ ಇಲ್ಲದೆಯೇ ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರು ರಾತ್ರೋರಾತ್ರಿ ಲೋಕಾಯುಕ್ತ ಎಸ್‌ಪಿ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ನಿನ್ನೆ ಮುಡಾದ ಹಿಂದಿನ ಆಯುಕ್ತ ನಟೇಶ್‌ ಅವರು ಲೋಕಾಯುಕ್ತ ಎಸ್‌ಪಿ ಕಚೇರಿಗೆ ವಿಚಾರಣೆಗೆಂದು ಹಾಜರಾಗಿದ್ದರು.

ನಟೇಶ್‌ ವಿಚಾರಣೆ ಮುಗಿದ ಅರ್ಧಗಂಟೆಯ ಬಳಿಕ ಮಲ್ಲಿಕಾರ್ಜುಸ್ವಾಮಿ ಅವರು ಲೋಕಾಯುಕ್ತ ಎಸ್‌ಪಿ ಉದೇಶ್‌ರನ್ನು ಭೇಟಿಯಾಗಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನಸ್ವಾಮಿ ಮೂರನೇ ಆರೋಪಿಯಾಗಿದ್ದು, ರಾತ್ರೋರಾತ್ರಿ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ಬೆಳವಣಿಗೆಗಳ ಮಧ್ಯೆ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿದ್ದು, ರಾತ್ರೋರಾತ್ರಿ ತನಿಖಾಧಿಕಾರಿ ಭೇಟಿ ಮಾಡುವ ಅನಿವಾರ್ಯತೆ ಏನಿತ್ತು? ಒಬ್ಬರನ್ನು ವಿಚಾರಣೆ ಮಾಡಿದ ಬಳಿಕ ವಿಚಾರಣಾಧಿಕಾರಿಯನ್ನು ಆರೋಪಿ ಭೇಟಿ ಮಾಡಿದ್ದು ಯಾಕೆ? ರಾತ್ರಿ ವೇಳೆ ಆರೋಪಿಗೆ ಲೋಕಾಯುಕ್ತ ಕಚೇರಿಗೆ ಬರಲು ಅವಕಾಶ ಕೊಟ್ಟಿದ್ದು ಯಾರು ಎಂದು ಪ್ರಶ್ನೆ ಮಾಡುತ್ತಿದ್ದಾರೆ.

 

 

Tags:
error: Content is protected !!