Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಾಹಿತ್ಯ ಸಮ್ಮೇಳನ: ರೂಟ್ ಮ್ಯಾಪ್‌ ಸಿದ್ದಪಡಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಸ್ಥಳಗಳಿಂದ ಆಗಮಿಸುವವರಿಗೆ ಅಗತ್ಯವಿರುವ ಸ್ಥಳಗಳ ಬಗ್ಗೆ ಯಾವುದೇ ಗೊಂದಲವಿಲ್ಲದೇ ತಿಳಿದುಕೊಳ್ಳಲು ರೂಟ್ ಮ್ಯಾಪ್ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು.

ಇಂದು(ನ.20) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ರೂಟ್ ಮ್ಯಾಪ್‌ ಸಿದ್ದಪಡಿಸಿ, ಅವುಗಳನ್ನು ಮುಖ್ಯ ರಸ್ತೆಗಳಲ್ಲಿ ಹಾಗೂ  ಹೆಚ್ಚು ಜನರಿಗೆ ಮಾಹಿತಿ ಸಿಗುವ  ಸ್ಥಳಗಳಲ್ಲಿ ಅನಾವರಣಗೊಳಿಸಬೇಕು ಎಂದರು.

ನಗರದ ಮುಖ್ಯ ಬಸ್ ನಿಲ್ದಾಣ ಹಾಗೂ ಪಾರ್ಕಿಂಗ್ ಸ್ಥಳದಿಂದ ಮಾಡುವ ಉಚಿತ ಬಸ್ ಸೇವೆಯ ಬಸ್ ಗಳ ಮೇಲೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉಚಿತ ಬಸ್ ಸೇವೆ ಎಂದು ಫಲಕವನ್ನು ಅಳವಡಿಸಬೇಕು. ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ನೊಂದಣಿಯಾಗುವ ಪ್ರತಿನಿಧಿಗಳಿಗೆ ವಸತಿ ಒದಗಿಸುವ ಸ್ಥಳದಿಂದ  ಬಸ್ ವ್ಯವಸ್ಥೆ ಮಾಡಬೇಕು. ಇವುಗಳಿಗೆ ಬೇಕಿರುವ ಸೂಚನಾ ಫಲಕಗಳನ್ನು ಸಿದ್ಧಪಡಿಸಿಕೊಂಡು ಅನಾವರಣ ಮಾಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ,  ಸಾರಿಗೆ ಬಸ್‌ಗಳು ದುರಸ್ತಿಗೆ ಒಳಗಾದ ಸಂದರ್ಭದಲ್ಲಿ ತಕ್ಷಣ ತೆರವುಗೊಳಿಸಲು ಎರಡು ಟೋಯಿಂಗ್ ವಾಹನಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಪೊಲೀಸರಿಗೆ ತಿಳಿಸಿದರು.

ಸಮ್ಮೇಳನದ ಸ್ಥಳದ ಮುಖ್ಯ ದ್ವಾರದಲ್ಲಿ ಸಹಾಯವಾಣಿ ಕಿಯೋಸ್ಕ್ ಗೆ ಇಬ್ಬರೂ ಕೆ.ಎಸ್.ಆರ್.ಟಿ‌.ಸಿ ಸಿಬ್ಬಂದಿಗಳನ್ನು ನಿಯೋಜಿಸಿ ಸಾರ್ವಜನಿಕರಿಗೆ ಬಸ್ ಗಳ ಬಗ್ಗೆ ಮಾಹಿತಿ ಒದಗಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಗಂಗಾಧರ ಸ್ವಾಮಿ ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಗೂ ಮುನ್ನ ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ವಸತಿ ವ್ಯವಸ್ಥೆ ಮತ್ತು ಪಾರ್ಕಿಂಗ್ ವ್ಯವಸ್ಥೆಗಳ ಬಗ್ಗೆ ಶಶಿ ಕಿರಣ ಸಮುದಾಯ ಭವನ, ಚೈತನ್ಯ ಟೆಕ್ನೋ ಶಾಲೆ,
ಮಾಂಡವ್ಯ ಕಾಲೇಜು ಸೇರಿದಂತೆ ಇನ್ನಿತರೆ ಸ್ಥಳ‌ ಪರಿಶೀಲಿಸಿದರು.

Tags: