Mysore
20
clear sky

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ 25 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಬೆಂಗಳೂರು: ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ ಸುಮಾರು 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ.

ಮಂಡ್ಯ, ಬೆಂಗಳೂರು, ಚಿಕ್ಕಬಳ್ಳಾಪುರ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಗಳ ಕಚೇರಿ ಹಾಗೂ ನಿವಾಸಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಮಂಡ್ಯದಲ್ಲಿ ಲೋಕಾಯುಕ್ತ ಎಸ್‌ಪಿ ಸುರೇಶ್‌ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್‌ ಮನೆಗಳ ಮೇಲೆ ದಾಳಿ ಮಾಡಲಾಗಿದೆ.

 

Tags:
error: Content is protected !!