Mysore
16
broken clouds

Social Media

ಮಂಗಳವಾರ, 06 ಜನವರಿ 2026
Light
Dark

ಓದುಗರ ಪತ್ರ| ಬಡವರ ಅನ್ನ ಕಸಿಯುವುದು ಬೇಡ

ರಾಜ್ಯದಲ್ಲಿ ವಕ್ಛ್ ಮಂಡಳಿಯು ರೈತರ ಭೂಮಿಗಳನ್ನು ಕಬಳಿಸುತ್ತಿದೆ ಎಂಬ ವಿವಾದದ ಬೆನ್ನಲ್ಲೇ ರಾಜ್ಯ ಸರ್ಕಾರ ತೆರಿಗೆ ಪಾವತಿಸುತ್ತಿದ್ದಾರೆ ಎಂದು ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಜನರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲು ಮುಂದಾಗಿದೆ.

ರಾಜ್ಯದಲ್ಲಿ ಅನೇಕ ಕುಟುಂಬಗಳು ಬಡತನ ರೇಖೆಗಿಂತ ಮೇಲಿದ್ದರೂ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡಿವೆ. ಅಂತಹವರ ಪಡಿತರ ಚೀಟಿಗಳನ್ನು ಅನರ್ಹ ಗೊಳಿಸುವುದರಲ್ಲಿ ಅರ್ಥವಿದೆ. ಆದರೆ ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಜನರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದು ಯಾವ ನ್ಯಾಯ? ಇದು ನಿಜಕ್ಕೂ ಖಂಡನೀಯ.

ರಾಜ್ಯದಲ್ಲಿನ ಕೂಲಿ ಕಾರ್ಮಿಕರು, ಆಟೋ ಚಾಲಕರು, ನೌಕರರು, ಸಣ್ಣಪುಟ್ಟ ವ್ಯಾಪಾರ ಮಾಡುವವರು ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗುವ ಪಡಿತರವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ ಸರ್ಕಾರ ಉಳ್ಳವರ ಪಡಿತರ ಚೀಟಿಗಳನ್ನು ರದ್ದು ಮಾಡುವ ಸಲುವಾಗಿ ದಿನಗೂಲಿ ಕಾರ್ಮಿಕರ ಪಡಿತರ ಚೀಟಿಗಳನ್ನೂ ರದ್ದು ಮಾಡಿದರೆ ಅದು ಅವರ ಅನ್ನವನ್ನು ಕಸಿದಂತಾಗುತ್ತದೆ. ಆದ್ದರಿಂದ ಸರ್ಕಾರ ಇಂತಹ ನಿರ್ಧಾರ ಗಳನ್ನು ತೆಗೆದುಕೊಳ್ಳುವ ಮುನ್ನ ಸರಿಯಾಗಿ ಪರಿಶೀಲಿಸಿ ನಿಜವಾದ ಫಲಾನು ಭವಿಗಳಿಗೆ ಸಮಸ್ಯೆಯಾಗದಂತೆ ಕ್ರಮವಹಿಸಲಿ.

-ಎಂ. ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.

 

Tags:
error: Content is protected !!