Mysore
25
haze

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಮೊಸರಲ್ಲಿ ಕಲ್ಲು ಹುಡುಕುವ ಬಿಜೆಪಿ: ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ: ಬಿಪಿಎಲ್‌ ಕಾರ್ಡ್‌ ರದ್ದತಿ ಕುರಿತು ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮದು ಜನಪರ ಸರ್ಕಾರ. ಯಾವುದೇ ಬಡವರ ಬಿಪಿಎಲ್‌ ಕಾರ್ಡ್‌ ರದ್ದಾಗಲ್ಲ. ಬಿಜೆಪಿಯವರು ಮುಂದಿನ ಗುರಿ ಬಗ್ಗೆ ತಿಳಿಸಲಿ. ಮೊಸರಲ್ಲಿ ಕಲ್ಲು ಹುಡುಕುವ ಬಿಡಲಿ ಎಂದು ಕುಟುಕಿದರು.

ಸುಮಲತಾ 5 ವರ್ಷ ಸಂಸದೆಯಾಗಿ ಬಹಳ ಕೆಲಸ ಮಾಡಿದ್ದಾರೆ. ಬಿಜೆಪಿ ಆಡಳಿತ ಕಾಲದಲ್ಲಿ ರೈತರಿಗೆ ಬಹಳಷ್ಟು ಅನ್ಯಾಯವಾಗಿದೆ. ಇದರ ಬಗ್ಗೆ ಸುಮಲತಾ ಹೋರಾಟ ಮಾಡಲಿ ಎಂದರು.

Tags:
error: Content is protected !!